
ಬಪ್ಪನಾಡು ಚೆಕ್ ಪೋಸ್ಟ್ ಬಳಿ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸಿದ್ದ ಯುವಕನ ಬಂಧನ
Thursday, February 20, 2025
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66 ಮುಲ್ಕಿ ಸಮೀಪದ ಬಪ್ಪನಾಡು ಚೆಕ್ ಪೋಸ್ಟ್ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
ಆರೋಪಿಯನ್ನು ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಮೊಹಮ್ಮದ್ ಸಲೀಂ(38) ಎಂದು ಗುರುತಿಸಲಾಗಿದೆ.
ಆರೋಪಿ ಮೊಹಮ್ಮದ್ ಸಲೀಂ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ರಿಜ್ಡ್ ಕಾರು (ಕೆಎ 19 ಎಂಪಿ 662)ನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಕಾರಿನ ಡ್ಯಾಶ್ ಬಾಕ್ಸ್ ನಲ್ಲಿ ಇರಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲು ಸಾಗಾಟ ಮಾಡಲು ಯತ್ನಿಸಿದ್ದು ಮುಲ್ಕಿ ಸಮೀಪದ ಅವಿಭಾಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಗಡಿಭಾಗದ ಬಪ್ಪನಾಡು ಚೆಕ್ಪೋಸ್ಟ್ ಬಳಿ ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ಅನಿತಾ ಹಾಗೂ ಪೋಲಿಸ್ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದಾಗ ಆರೋಪಿ ಚಾಲಕ ಕಾರು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದಾನೆ
ಕೂಡಲೇ ಅಲರ್ಟ್ ಆದ ಪೊಲೀಸರು ಆರೋಪಿಯನ್ನು ಕಾರು ಸಮೇತ ಬಂಧಿಸಿ ಕಾರಿನಲ್ಲಿದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು, ಹೈಡ್ರೋ ವೀಡ್ ಗಾಂಜಾ, ಸಹಿತ ಅನೇಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.