
ಅಪಘಾತ: ಸ್ಕೂಟರ್ ಸವಾರೆ ಚಿಕಿತ್ಸೆ ಫಲಕಾರಿಯಾಗದೆ ಸಾವು
Friday, February 7, 2025
ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ಆಫೀಸ್ ಬಳಿ ಗುರುವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರೆ ಶಿಮಂತೂರು ನಿವಾಸಿ ಮಮತಾ ಬಂಗೇರ (42) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ
ಗುರುವಾರ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ಬಳಿ ಟೆಂಪೋ ರಿಕ್ಷಾಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿಯಾಗಿ ಸವಾರೆ ಮಮತಾ ರವರ ಮುಖ ಹಾಗೂ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು
ಮೃತ ಮಹಿಳೆ ಮಮತಾ ಬಂಗೇರ ಕಳೆದ ಹಲವಾರು ವರ್ಷಗಳಿಂದ ಮುಂಬೈನಲ್ಲಿ ವಾಸ್ತವ್ಯವಿದ್ದು ಇತ್ತೀಚೆಗಷ್ಟೇ ಶಿಮಂತೂರು ಸಮೀಪ ನೂತನ ಮನೆ ಗೃಹಪ್ರವೇಶ ಮಾಡಿಸಿ ತಮ್ಮ ಏಕೈಕ ಪುತ್ರಿಯ ಜೊತೆ ನೆಲೆಸಿದ್ದರು.ಪುತ್ರಿ ಎಸ್ ಕೋಡಿ ಬಳಿಯ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದು.
ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಬಳಿಕ ಮೈಸೂರಿನಲ್ಲಿ ಸ್ವಂತ ಉದ್ಯೋಗ ಮಾಡಿಕೊಂಡಿದ್ದರು.
ಮಹಿಳೆಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಶಿಮಂತೂರು ಪರಿಸರದಲ್ಲಿ ಶೋಕತ್ರಪ್ತ ವಾತಾವರಣ ಸೃಷ್ಟಿಯಾಗಿದೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.