5ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಧರಣಿ ನಿರತರಿಂದ ‘ರಕ್ತದಾನ’

5ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಧರಣಿ ನಿರತರಿಂದ ‘ರಕ್ತದಾನ’


ಪುತ್ತೂರು: ಕಳೆದ ನಾಲ್ಕು ದಿನಗಳಿಂದ ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯವ್ಯಾಪಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದ್ದು, ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗ ಧರಣಿ ನಡೆಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ಶುಕ್ರವಾರ ರಕ್ತದಾನ ಮಾಡುವ ಮೂಲಕ ಧರಣಿಗೆ ಹೊಸ ಚಿಂತನೆ ನೀಡಿದ್ದಾರೆ. 

ಪುತ್ತೂರು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಇದರ ವತಿಯಿಂದ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಉಮೇಶ್ ಕವಾಡಿ ಇವರ ನೇತೃತ್ವದಲ್ಲಿ ಹಾಗೂ ಪುತ್ತೂರು ತಾಲೂಕು ಅಧ್ಯಕ್ಷರ ನೇತೃತ್ವ ಮತ್ತು ಪದಾಧಿಕಾರಿಗಳ ಸಹಯೋಗದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಕಾರದೊಂದಿಗೆ  ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಮುಷ್ಕರದ ಸ್ಥಳದಲ್ಲಿ ರಕ್ತದಾನ ಶಿಬಿರದ ಮೂಲಕ ತಮ್ಮ ಬೇಡಿಕೆಯನ್ನು ಆಗ್ರಹಿಸಿರುವುದು ವಿಶೇಷತೆಯನ್ನು ತೋರಿಸಿದೆ. ತಹಸೀಲ್ದಾರ್ ಪುರಂದರ ಅವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. 

ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜಯದೀಪ್, ರೋಟರಿ ಕ್ಲಬ್ ಪುತ್ತೂರು ಯುವದ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಹರ್ಷಕುಮಾರ್ ರೈ ಮಾಡಾವು, ರೋಟರಿ ಪುತ್ತೂರು ಯುವದ ಅಧ್ಯಕ್ಷೆ ಅಶ್ವಿನಿಕೃಷ್ಣ ಮುಳಿಯ ಸಹಯೋಗ ನೀಡಿದರು. ರೋಟರಿ ಬಡ್ಲ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಉಪಸ್ಥಿತರಿದ್ದರು. 

ಸುಮಾರು 33 ಮಂದಿ ರಕ್ತದಾನ ಮಾಡಿದ್ದಾರೆ ಎಂದು ಗ್ರಾಮ ಆಡಳಿತಾಧಿಕಾರಿ ತಾಲೂಕು ಅಧ್ಯಕ್ಷರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article