
ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
Thursday, February 13, 2025
ಪುತ್ತೂರು: ಮೂರು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಬೆದ್ರಾಳ ಎಂಬಲ್ಲಿನ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ(18) ಮೃತಪಟ್ಟ ಯುವತಿ.
ಪ್ರತೀಕ್ಷಾ ಫೆ.9ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.