
ಕೆರೆಗೆ ಹಾರಿ ಯುವಕ ಆತ್ಮಹತ್ಯೆ
Wednesday, February 26, 2025
ಪುತ್ತೂರು: ಅವಿವಾಹಿತ ಯುವಕನೋರ್ವ ತಮ್ಮ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಕಿಂಡೋವು ನಿವಾಸಿ ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ಮೃತಪಟ್ಟ ಯುವಕ.
ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದ ಈತನ ಶವ ತೋಟದ ಕೆರೆಯಲ್ಲಿ ಮಂಗಳವಾರ ಪತ್ತೆಯಾಗಿದೆ. ಕೂಲಿಕಾರ್ಮಿಕನಾಗಿದ್ದ ಈತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದುಬಂದಿಲ್ಲ. ಮೃತ ಯುವಕ ತಂದೆ ತಾಯಿ, ಓರ್ವ ಸಹೋದರ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾನೆ. ಉಪ್ಪಿನಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.