
ಬಾಣಂತಿ ಹೊಟ್ಟೆಯಲ್ಲಿ ಬಟ್ಟೆ ಉಂಡೆ ಪ್ರಕರಣ: ಸೂಕ್ತ ತನಿಖೆಗೆ ಉಸ್ತುವಾರಿ ಸಚಿವರ ಸೂಚನೆ
Monday, February 24, 2025
ಪುತ್ತೂರು: ಬಾಣಂತಿ ಹೊಟ್ಟೆಯಲ್ಲಿ ಬಟ್ಟೆ ಉಂಡೆ ಬಿಟ್ಟ ಪ್ರಕರಣವನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ತಜ್ಞರ ತಂಡದ ಮೂಲಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಹೊರಡಿಸಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರನ್ನೊಳಗೊಂಡ ತಂಡ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಘಟನೆಯ ಸಮಗ್ರ ಮಾಹಿತಿಯನ್ನು ಪಡೆದಿದ್ದಾರೆ. ಅಗತ್ಯ ದಾಖಲೆ ಪತ್ರಗಳನ್ನು ಸಂಗ್ರಹಿಸಿಕೊಂಡಿದ್ದಾರೆ. ಕೃತ್ಯ ಎಸಗಿದ ಸಿಟಿ ಆಸ್ಪತ್ರೆಗೆ ಭೇಟಿಯನ್ನು ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ ಮಾಡಿದ್ದಾರೆ.