
ಹಿನ್ನೆಲೆ ಗಾಯಕಿ ಎಸ್. ಜಾನಕಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ
Thursday, February 20, 2025
ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಯವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು.
ಇವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾ ಅಧಿಕಾರಿ ಯೇಸುರಾಜ್ ಸ್ವಾಗತಿಸಿದರು. ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತ್ ಸದಸ್ಯ ಹರೀಶ ಇಂಜಾಡಿಯವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಗಾಯಕ ಯಜ್ಞೇಶ್ ಆಚಾರ್, ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.