
ಫೆ.17ರಂದು ಉಡುಪಿಯಿಂದ ಕುಂಭಮೇಳ ರೈಲು
ಉಡುಪಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಲು ಇಚ್ಚಿಸಿರುವ ಕರಾವಳಿ ಭಾಗದ ಯಾತ್ರಾರ್ಥಿಗಳಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗುತ್ತಿದ್ದು, ಫೆ.17ರಂದು ಉಡುಪಿಯಿಂದ ಪ್ರಯಾಗರಾಜ್‌ಗೆ ತೆರಳಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಫೆ.17ರ ಮಧ್ಯಾಹ್ನ 12.30ಕ್ಕೆ ಉಡುಪಿಯಿಂದ ಹೊರಟ ರೈಲು, 19ರಂದು ಬೆಳಿಗ್ಗೆ 6.30 ಗಂಟೆಗೆ ಪ್ರಯಾಗರಾಜ್ ತಲುಪಲಿದೆ. ಹಾಗೂ ಮಾರನೇ ದಿನ ಫೆ.20ರಂದು ಸಂಜೆ 6.30 ಗಂಟೆಗೆ ಪ್ರಯಾಗರಾಜ್‌ನಿಂದ ಹೊರಟು 22ರಂದು ಉಡುಪಿ ತಲುಪಲಿದೆ ಎಂದವರು ತಿಳಿಸಿದ್ದಾರೆ.
ವಿಭಿನ್ನ ಆರ್ಥಿಕ ಹಿನ್ನೆಲೆಯ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸಾಮಾನ್ಯ ಮತ್ತು ಹವಾನಿಯಂತ್ರಣ ಕೋಚ್‌ಗಳನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಜನತೆ ಸದುಪಯೋಗಪಡೆದುಕೊಳ್ಳಬಹುದು ಎಂದು ಸಂಸದ ಕೋಟ ತಿಳಿಸಿದ್ದಾರೆ.
ರೈಲು ಟಿಕೆಟ್‌ಗಳು ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ಆಯಾ ರೈಲು ನಿಲ್ದಾಣಗಳ ಟಿಕೆಟ್ ಕೌಂಟರ್‌ಗಳಲ್ಲಿ ಲಭ್ಯ ಎಂದವರು ತಿಳಿಸಿದ್ದಾರೆ.