
ಉದ್ಯೋಗ ಪೋಸ್ಟರ್ ಬಿಡುಗಡೆ
Wednesday, February 12, 2025
ಉಡುಪಿ: ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ. 19ರಂದು ನಡೆಯಲಿರುವ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳದ ಪೋಸ್ಟರ್‌ನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಮೊದಲಾದವರಿದ್ದರು.