
ಯುವತಿ ವಿಚಾರದಲ್ಲಿ ಇತ್ತಂಡಗಳ ನಡುವೆ ಹೊಡೆದಾಟ
Saturday, February 15, 2025
ಉಡುಪಿ: ಯುವತಿ ವಿಚಾರದಲ್ಲಿ ಇತ್ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಮಣಿಪಾಲದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಪ್ರೇಮಿಗಳ ದಿನದಂದೇ ಘಟನೆ ನಡೆದಿದ್ದು, ಒಬ್ಬಾಕೆ ಹುಡುಗಿಗಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.
ಮಣಿಪಾಲ ಕಾಯಿನ್ ವೃತ್ತದ ಬಳಿಯ ಬಾರ್ ಮುಂದೆ ಗಲಾಟೆ ನಡೆದಿದ್ದು, ಗಲಾಟೆ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರೂ ವಿಫಲರಾದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.