
ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಬ್ಬಳ್ಳಿಯಲ್ಲಿ ‘ಆರೋಗ್ಯಬಂಧು’ ಪ್ರಶಸ್ತಿ ಪ್ರದಾನ
Saturday, February 22, 2025
ಉಜಿರೆ: ಹುಬ್ಬಳ್ಳಿಯ ಲೋಕ ಶಿಕ್ಷಣ ಟ್ರಸ್ಟ್ ಮತ್ತು ಸಂಯುಕ್ತ ಕರ್ನಾಟಕ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ಅರೋಗ್ಯ ಹಬ್ಬ’ ಕಾರ್ಯಕ್ರಮದಲ್ಲಿ ಘೋಷಿಸಿದ್ದ ‘ಅರೋಗ್ಯ ಬಂಧು’ ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧಾರವಾಡದ ಸತ್ತೂರಿನ ಅವರ ನಿವಾಸದಲ್ಲಿ ಪ್ರದಾನ ಮಾಡಲಾಯಿತು.
ಲೋಕ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಶ್ರೀಹರಿ ಚೆನ್ನಕೇಶವ, ಸಂಯುಕ್ತ ಕರ್ನಾಟಕ ಸಂಪಾದಕ ಮಹಾಬಲ ಸೀತಾಳಬಾವಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಹೆಗಡೆ, ಸಾರ್ವಜನಿಕ ಸಂಪರ್ಕಾಧಿಕಾರಿ ಎನ್.ಎಂ. ಹೆಗ್ಡೆ, ಎಸ್‌ಡಿಎಂ ಸೊಸೈಟಿ ಕಾರ್ಯದರ್ಶಿ ಜೀವಂಧರ ಕುಮಾರ, ಸಂಯುಕ್ತ ಕರ್ನಾಟಕ ಜಾಹಿರಾತು ವಿಭಾಗದ ವ್ಯವಸ್ಥಾಪಕ ವಿಘ್ನೇಶ್ ಭಟ್, ಸಂಯುಕ್ತ ಕರ್ನಾಟಕ ನೌಕರರ ಸಂಘದ ಅಧ್ಯಕ್ಷ ವಿಲಾಸ ಜೋಶಿ, ವರದಿಗಾರ ರವೀಶ ಪವಾರ ಉಪಸ್ಥಿತರಿದ್ದರು.