
ಧರ್ಮಸ್ಥಳದಲ್ಲಿ ಶಿವರಾತ್ರಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ
Monday, February 24, 2025
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಪಾದಯಾತ್ರಿಗಳಿಗಾಗಿ ಮುಖ್ಯ ಪ್ರವೇಶದ್ವಾರದಲ್ಲಿ ಸ್ವಾಗತ ಕಾರ್ಯಾಲಯವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು.
ಪಾದಯಾತ್ರಿಗಳ ಅನುಕೂಲತೆಗಾಗಿ ಉಚಿತ ವೈದ್ಯಕೀಯ ಚಿಕಿತ್ಸಾಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರಡಾ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.