
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಸಿರು ಹೊರಕಾಣಿಕೆ ಸಮರ್ಪಣೆ
ಉಳ್ಳಾಲ: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಇದರ ವತಿಯಿಂದ. ಫೆ.೨೧, 22ರಂದು ಮಂಗಳೂರು ವಿವಿ ಆವರಣದಲ್ಲಿ ನಡೆಯಲಿರುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಪಂಚಾಯತ್, ಸಾರ್ವಜನಿಕರಿಂದ ಸಂಗ್ರಹಿಸಿದ ಹಸಿರು ಹೊರೆಕಾಣಿಕೆ ಸಮರ್ಪಣಾ ಕಾರ್ಯಕ್ರಮ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ದೇವೇಂದ್ರಪ್ಪ ಮಾತನಾಡಿ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳೂರು ವಿವಿಯಲ್ಲಿ ನಡೆಯಲಿರುವ ಊರ ಹಬ್ಬವಾಗಿ, ಉತ್ಸವ ರೂಪದಲ್ಲಿ ನಡೆಯಲಿದ್ದು, ಇದಕ್ಕೆ ಪೂರಕವಾಗಿ ಎಲ್ಲಾ ಪಂಚಾಯತ್, ಊರಿನ ನಾಗರಿಂದ ಸಂಪೂರ್ಣ ಸಹಕಾರ ದೊರೆಯಲಿದೆ. ಕಾರ್ಯಕ್ರವು ಎಲ್ಲರ ಸಮನ್ವಯತೆಯ ಪ್ರಯತ್ನಗಳೊಂದಿಗೆ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಡಾ. ಧನಂಜಯ ಕುಂಬ್ಳೆ ಅವರು, ಸಮ್ಮೆಳನವು ಈ ಊರಿನ ಎಲ್ಲರ ಒಳಗೊಳ್ಳುವಿಕೆಯ ಮೂಲಕ ಆಗಬೇಕು ಎನ್ನುವುದು ನಮ್ಮೆಲ್ಲರ ಕನಸು. ಈ ದೃಷ್ಟಿಯಿಂದ ಗ್ರಾಮ ಎಲ್ಲಾ ಪಂಚಾಯತಿ ವ್ಯಾಪ್ತಿಯಿಂದ ಸಮ್ಮೇಳನಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯರಾದ ಅಚ್ಯುತ ಗಟ್ಟಿ, ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್, ಕೋಶಾಧಿಕಾರಿ ಚಂದ್ರಹಾಸ್ ಶೆಟ್ಟಿ, ಸಮ್ಮೇಳನದ ಸಂಯೋಜನಾ ಸಮಿತಿಯ ಪದಾಧಿಕಾರಿಗಳಾದ ಸುರೇಂದ್ರ ರೈ ಗ್ರಾಮಚಾವಡಿ, ರಾಧಾಕೃಷ್ಣ ರಾವ್, ಡಾ.ಚಂದ್ರು ಹೆಗ್ಡೆ, ಹರೀಶ್ ಪೂಜಾರಿ ಕೊಣಾಜೆ, ಡಾ. ಮೋಹನ್, ಸಾಹಿತಿಗಳಾದ ನಾಸೀರ್ ಸಜಿಪ, ಡಾ. ರಾಮಮೂರ್ತಿ, ಪ್ರಸಾದ್, ಕಿರಣ್, ಪ್ರಸಾದ್, ನಿಸಾರ್ ಮತ್ತಿತರರು ಉಪಸ್ಥಿತರಿದ್ದರು.
ಜೊತೆ ಕಾರ್ಯದರ್ಶಿ ತ್ಯಾಗಂ ಹರೇಕಳ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಧಾಕೃಷ್ಣ ರಾವ್ ವಂದಿಸಿದರು.