
ಮಾಣಿಕ್ಯ ಖ್ಯಾತಿಯ ನಟಿ ರನ್ಯಾ ಬಂಧನ
ಬೆಂಗಳೂರು: ಅಕ್ರಮ ಚಿನ್ನ ಸಾಗಾಟದ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿದೇಶದಿಂದ ಬಂದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್‌ನಲ್ಲಿ ಕಳೆದ ರಾತ್ರಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದ್ದು. ಏರ್ಪೋರ್ಟ್ ಕಸ್ಟಮ್ಸ್ ಡಿಆರ್‌ಐ ತಂಡ ರನ್ಯಾ ರಾವ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಕಳೆದ ರಾತ್ರಿ ದುಬೈನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಟಿ ರನ್ಯಾ ಆಗಮಿಸಿದ್ದರು. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪದಲ್ಲಿ ರನ್ಯ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ನಟಿ ರನ್ಯಾ ರಾವ್ ದಕ್ಷಿಣ ಭಾರತೀಯ ಚಲನಚಿತ್ರಗಳಲ್ಲಿ ಕಾಣಿಸಿಕೊಂಡ ನಟಿ ಮತ್ತು ರೂಪದರ್ಶಿ. ಅವರು 2024ರ ಕನ್ನಡ ಚಲನಚಿತ್ರ ಮಾಣಿಕ್ಯ ಮೂಲಕ ತಮ್ಮ ಚೊಚ್ಚಲ ಸಿನಿಮಾ ಪ್ರವೇಶ ಮಾಡಿದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯವರು ಆಗಿರುವ ನಟಿ ರನ್ಯಾ ಅವರು ಬೆಂಗಳೂರಿನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ನಟನೆಗೆ ಇಳಿದಿದ್ದಾರೆ. ತಮಿಳಿನಲ್ಲಿ ವಿಕ್ರಮ ಪ್ರಭು ಜೊತೆಗೆ ವಾಘಾ ಹಾಗೂ ಕನ್ನಡದಲ್ಲಿ ಗಣೇಶ್ ಜೊತೆಗೆ ಪಟಾಕಿ ಸಿನಿಮಾಗಳಲ್ಲಿ ಸಹ ನಟಿಸಿದ್ದಾರೆ.