ಯಕ್ಷಗಾನ ನಮ್ಮ ದೇಶದ ಆಸ್ತಿ, ಅನುಮತಿ ಪ್ರಕ್ರಿಯೆ ಮತ್ತಷ್ಟು ಸರಳೀಕರಣ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯಕ್ಷಗಾನ ನಮ್ಮ ದೇಶದ ಆಸ್ತಿ, ಅನುಮತಿ ಪ್ರಕ್ರಿಯೆ ಮತ್ತಷ್ಟು ಸರಳೀಕರಣ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್


ಬೆಂಗಳೂರು: ಯಕ್ಷಗಾನ ನಮ್ಮ ಸಂಸ್ಕೃತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೆ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ವಿಧಾನಸಭೆಯ ಗಮನ ಸೆಳೆವ ಚರ್ಚೆ ವೇಳೆ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನೀಡುವಂತೆ ಗೃಹ ಸಚಿವರ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉತ್ತರ ನೀಡಿದರು.

ಯಕ್ಷಗಾನ ಪ್ರದರ್ಶನಕ್ಕೆ ಪೂರ್ವಾನುಮತಿ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಸುನೀಲ್ ಕುಮಾರ್ ಅವರು ಪ್ರಸ್ತಾಪಿಸಿದ್ದಾರೆ. ಯಕ್ಷಗಾನ ಮಾಡುವಾಗ ಯಾರೂ ಇಂದು ಅರ್ಜಿ ಹಾಕಿ ನಾಳೆ ಯಕ್ಷಗಾನ ಪ್ರದರ್ಶನ ಮಾಡುವುದಿಲ್ಲ. ಅದಕ್ಕೆ 15 ದಿನಗಳ ತಯಾರಿ ಇರುತ್ತದೆ. ಬಿಜೆಪಿ ಕಾಲದಲ್ಲೂ ಕೆಲವು ನಿಯಮಾವಳಿಗಳನ್ನು ರೂಪಿಸಲಾಗಿದೆ. ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ಪಡೆಯಲು ಕಾಲಾವಕಾಶ ನೀಡಬೇಕು. ಯಕ್ಷಗಾನ ಬೆಳಗಿನ ಜಾವದವರೆಗೂ ನಡೆಯುವುದರಿಂದ ಮಧ್ಯರಾತ್ರಿಯೇ ನಿಲ್ಲಿಸಬೇಕು ಎಂದು ಯಾರೂ ಆಕ್ಷೇಪ ಮಾಡುವುದಿಲ್ಲ. ಈಗ ಆಗಿರುವ ಪ್ರಕರಣವನ್ನು ಪರಿಶೀಲನೆ ಮಾಡುತ್ತೇವೆ. ಯಕ್ಷಗಾನ, ಬಯಲಾಟ ದೇಶದ ಆಸ್ತಿ. ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂಬುದು ನಮ್ಮ ಉದ್ದೇಶವಿದೆ. ನಮ್ಮ ಸಂಸ್ಕೃತಿ ಪರಂಪರೆಯನ್ನು ನಿಲ್ಲಿಸಲು ಆಗುವುದಿಲ್ಲ” ಎಂದು ಭರವಸೆ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article