
ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
Thursday, March 20, 2025
ಬಂಟ್ವಾಳ: ಪರಂಗಿಪೇಟೆ ಎಂಬಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪುದು ಗ್ರಾಮದ ಕುಮ್ಮೆಲು ನಿವಾಸಿ ರವಿ (54) ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ.13 ರಂದು ಫರಂಗಿಪೇಟೆಯಲ್ಲಿ ಸಂಜೆ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಕೇಸು ದಾಖಲಾಗಿದೆ.