
ಅಕ್ಷರ ದಾಸೋಹ ನೌಕರಿಂದ ೨ನೇ ದಿನವೂ ಮುಂದುವರಿದ ಪ್ರತಿಭಟನೆ
Wednesday, March 5, 2025
ಬಂಟ್ವಾಳ: ಅಕ್ಷರ ದಾಸೋಹ ನೌಕರರಿಗೆ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6000 ವೇತನ ಹೆಚ್ಚಳ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಬಿ.ಸಿ. ರೋಡು ಮಿನಿವಿಧಾನಸೌಧದ ಮುಂದೆ ಎರಡನೇ ದಿನವೂ ಪ್ರತಿಭಟನೆ ಮುಂದುವರಿಯಿತು.
ಬಳಿಕ ಅಕ್ಷರ ದಾಸೋಹ ಯೋಜನೆ ತಾಲೂಕು ಅಧಿಕಾರಿ ನೋಣಯ್ಯ ನಾಯ್ಕ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ದ.ಕ. ಜಿಲ್ಲಾ ಅಧ್ಯಕ್ಷ ರಾಮಣ್ಣ ವಿಟ್ಲ, ಸುಲೈಮಾನ್ ಕೆಳಿಂಜ, ಅಕ್ಷರ ದಾಸೋಹ ಸಂಘಟನೆಯ ತಾಲೂಕು ಅಧ್ಯಕ್ಷ ಜಯಶ್ರೀ ಆರ್.ಕೆ., ಕಾರ್ಯದರ್ಶಿ ವಾಣಿಶ್ರೀ ಕನ್ಯಾನ, ಉಪಾಧ್ಯಕ್ಷರುಗಳಾದ ವಿನಯ ನಡುಮೊಗರು, ಸೇವಂತಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.