
ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲಿನಲ್ಲಿ" ಬಂಟ್ವಾಳ ಕಂಬಳ" ಎಂದೆ ಪ್ರಸಿದ್ದಿ ಪಡೆದಿರುವ ೧೪ ನೇ ವರ್ಷದ ಹೊನಲು ಬೆಳಕಿನ ಮೂಡೂರು- -ಪಡೂರು ಜೋಡುಕರೆ ಬಯಲು ಕಂಬಳ ಕೂಟಕ್ಕೆ ಶನಿವಾರ ಬೆಳಗ್ಗೆ ಅದ್ದೂರಿಯ ಚಾಲನೆ ನೀಡಲಾಯಿತು.
ಆಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಹಾಗೂ ಅಲ್ಲಿಪಾದೆ ಸಂತ ಅಂತೋನಿ ಧರ್ಮ ಕೇಂದ್ರದ ಧರ್ಮ ಗುರುಗಳಾದ ರಾಬರ್ಟ್ ಡಿಸೋಜ ಉದ್ಘಾಟಿಸಿ ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಗೌರವಾಧ್ಯಕ್ಷರು, ಮಾಜಿ ಸಚಿವರಾಸ ಬಿ, ರಮಾನಾಥ ರೈ ಅವರು ವಹಿಸಿದ್ದರು.
ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಇಂಧನ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ, ವಿ.ಪ.ಸದಸ್ಯ ಐವಾನ್ ಡಿಸೋಜ,ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೋ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್,ನಮ್ಮ ಕುಡ್ಲ ವ್ಯವಸ್ಥಾಪಕ ನಿರ್ದೇಶಕ ಲೀಲಾಕ್ಷ ಕರ್ಕೇರ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್ ಆರ್.ಕೆ, ಮಾಜಿ ಶಾಸಕ ಜೆ.ಆರ್. ಲೋಬೋ, ತುಳು ಸಾಹಿತ್ಯಅಕಾಡೆಮಿಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ,ಫರ್ಲಾ ಚರ್ಚ್ ಧರ್ಮಗುರು ಮಾರ್ಕ್ ಅರುಣ್ ಡಿಸೋಜ, ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ಅಧ್ಯಕ್ಷ ಆಲ್ವಿನ್ ಡಿಸೋಜ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವಾ,ಮೋಹನದಾಸ್ ಕೊಟ್ಟಾರಿ, ನ್ಯಾಯವಾದಿ ಶೈಲಜಾ ರಾಜೇಶ್,ಮನಪಾ ಸದಸ್ಯರಾದ ಶಶಿಧರ ಹೆಗ್ಡೆ,ಭಾಸ್ಕರ ಕೆ.,ಪ್ರವೀಣ್ ಆಳ್ವ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸಿದ್ದರು.
ಕಂಬಳ ಸಮಿತಿಯ ಸಂಚಾಲಕ ಬಿ.ಪದ್ಮಶೇಖರ್ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಪದಾಧಿಕಾರಿಗಳಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಸುದೀಪ್ಕುಮಾರ್ ಶೆಟ್ಟಿ, ಸುಧಾಕರ ಶೆಣೈ ಖಂಡಿಗ, ಲೋಲಾಕ್ಷ ಶೆಟ್ಟಿ, ಚಂದ್ರಶೇಖರ ಭಂಡಾರಿ, ಪದ್ಮನಾಭರೈ, ವೀರೇಂದ್ರ ಅಮೀನ್, ಉಮೇಶ್ ಕುಲಾಲ್ ನಾವೂರು, ಬಿ.ಆರ್. ಅಂಚನ್, ಅಬ್ಬಾಸ್ ಆಲಿ,ಚಿತ್ತರಂಜನ್ ಶೆಟ್ಟಿ ಬೊಂಡಾಲ, ಲವೀನಾ ವಿಲ್ಮಾ ಮೊದಲಾದವರು ಉಪಸ್ಥಿತರಿದ್ದರು.
ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಪ್ರಸ್ತಾವಿಸಿ, ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.