ಗ್ರಾ.ಪಂ. ಸದಸ್ಯನಿಂದ ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಗ್ರಾ.ಪಂ. ಸದಸ್ಯನಿಂದ ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಬಂಟ್ವಾಳ: ಬಸ್ಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ನಾವೂರು ಗ್ರಾ.ಪಂ. ಸದಸ್ಯನೋರ್ವನನ್ನು ಕಲ್ಲಡ್ಕದಲ್ಲಿ ಹಿಡಿದು ಬಂಟ್ವಾಳ ನಗರ ಪೊಲೀಸ್ ಠಾಣೆಗೊಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

ಆರೋಪಿಯನ್ನು ನಾವೂರ ಗ್ರಾಮ ಪಂಚಾಯಿತ್‌ನ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ಗುರುತಿಸಲಾಗಿದೆ.

ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಈತನನ್ನು ಕಲ್ಲಡ್ಕದಲ್ಲಿ ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಬಳಿಕ ನಗರ ಠಾಣೆಗೆ ಒಪ್ಪಿಸಿದ್ದಾರೆ.

ರಿಕ್ಷಾ ಚಾಲಕನಾಗಿರುವ ಮೋನು ಪುತ್ತೂರಿನಿಂದ ಬಿ.ಸಿ.ರೋಡುವರೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ತನ್ನ ಪಕ್ಕ ಕುಳಿತಿದ್ದ ವಿದ್ಯಾರ್ಥಿನಿಯ ಮೈಮೇಲೆ ಬಿದ್ದು ಉದ್ದೇಶಪೂರ್ವಕವಾಗಿ ಬೀಳುತ್ತಾ ಕೀಟಲೆ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ನಿರ್ವಾಹಕ ಆತನಿಗೆ ಸರಿಯಾಗಿ ಕುಳಿತುಕೊಳ್ಳುವಂತೆ ಎಚ್ಚರಿಸಿದ್ದ.

ಅನುಚಿತ ವರ್ತಿನೆಯಿಂದಾಗಿ ಇತರ ಪ್ರಯಾಣಿಕರಿಗೂ ಗೊತ್ತಾಗಿ ಇನ್ನೇನು ಸಿಕ್ಕಿಬೀಳುವ ಭಯದಿಂದ ಈತ ಕಲ್ಲಡ್ಕದಲ್ಲಿ ಬಸ್‌ನಿಂದ ಇಳಿದು ಪರಾರಿಯಾಗಲು ಯತ್ನಿಸಿದ್ದ, ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಈತನನ್ನು ಹಿಡಿಯುವಂತೆ ಸೂಚಿಸಿದ್ದು, ತಕ್ಷಣ ಸ್ಥಳೀಯರು ಈತನನ್ನು ಹಿಡಿದು ಧರ್ಮದೇಟು ನೀಡಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಈತನ ಮೇಲೆ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article