
ಬಾರಕೂರು ಕಾಲೇಜು: ವ್ಯಕ್ತಿತ್ವ ವಿಕಸನ ಕಾರ್ಯಕ್ರಮ
Thursday, March 6, 2025
ಬಾರಕೂರು: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಐಕ್ಯೂಎಸಿ ಮತ್ತು ಸಮಾಜಕಾರ್ಯ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ ಸಳ್ವಾಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಜೀವನ ಕೌಶಲ್ಯಗಳು ಮಾನವನ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕು. ಜ್ಞಾನದೊಂದಿಗೆ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು ಎಂದರು.
ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಅವರು ವಿವಿಧ ಚಟುವಟಿಕೆಗಳ ಮೂಲಕ ನಾಯಕತ್ವ ಮತ್ತು ಸಂವಹನ ಕಲೆ ಬಗ್ಗೆ ತರಬೇತಿ ನಡೆಸಿಕೊಟ್ಟರು. ರೋವರ್ಸ್ ಲೀಡರ್ ಸತೀಶ್ ಕುಮಾರ್ ಬಿ.ಡಿ ಉಪಸ್ಥಿತರಿದ್ದರು.
ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ಎನ್.ಎ., ಅವರು ಕಾರ್ಯಕ್ರಮವನ್ನು ಸಂಘಟಿಸಿ ನಿರ್ವಹಿಸಿದರು.