ಅನುದಾನದ ಕೊರತೆಯಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ೦ಡಿವೆ: ಶಾಸಕ ಡಾ. ಭರತ್ ಶೆಟ್ಟಿ

ಅನುದಾನದ ಕೊರತೆಯಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ೦ಡಿವೆ: ಶಾಸಕ ಡಾ. ಭರತ್ ಶೆಟ್ಟಿ


ಗುರುಪುರ: ಸರ್ಕಾರಿ ಅನುದಾನದ ಕೊರತೆಯಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ೦ಡಿವೆ. ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಸರ್ಕಾರ ಮೇಲೆ ಒತ್ತಡ ತಂದು ಅಭಿವೃದ್ಧಿ ಕೆಲಸಗಳಿಗೆ ಅನುದಾನ ತರುವ ಕೆಲಸವಾಗಬೇಕು. ಶಾಸಕನಾಗಿದ್ದ ಹಿಂದಿನ ಅವಧಿಯಲ್ಲಿ ಈ ಪಂಚಾಯತ್ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಮಠದಗುಡ್ಡೆಯಲ್ಲಿ ಸಿಎಂ ಗ್ರಾಮ ವಿಕಾಸ ಯೋಜನೆ ಮತ್ತು ತಾಲೂಕು ಪಂಚಾಯತ್‌ನ ಒಟ್ಟು 31 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನ ಮಾ.2ರಂದು ಲೋಕಾರ್ಪಣೆಗೊಳಿಸಿ ಮಾತನಾಡಿದರು.


ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಮಾತನಾಡಿ, 1992-93ರ ಅವಧಿಯಲ್ಲಿ ಸಂವಿಧಾನಕ್ಕೆ ತರಲಾದ ಮಹತ್ವದ ತಿದ್ದುಪಡಿ ಮೂಲಕ ಅಧಿಕಾರ ವಿಕೇಂದ್ರೀಕರಣ ಸಾಧ್ಯವಾಗಿದೆ. ಪಂಚಾಯತ್‌ರಾಜ್ ಕಾಯ್ದೆಯ ಅಧಿನಿಯಮದನ್ವಯ ಎಸ್‌ಸಿ/ಎಸ್‌ಟಿಗಳಿಗೆ ಮೀಸಲಾತಿ ಸಿಕ್ಕಿದ್ದು, ಸಮುದಾಯಗಳು ಬಲಯುತಗೊಳ್ಳುತ್ತಿವೆ. ಈ ಭವನದಿಂದ ಸಮುದಾಯಕ್ಕೆ ಹೆಚ್ಚು ಪ್ರಯೋಜನವಾಗಲಿ ಎಂದರು.


ಗುರುಪುರ ಪಂಚಾಯತ್ ಅಧ್ಯಕ್ಷೆ ಸಫರಾ ಮದಕ ಮಾತನಾಡಿ, ಎಸ್‌ಸಿ/ಎಸ್‌ಟಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂಬುದು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಕನಸಾಗಿತ್ತು. ಅವರ ಕನಸು ಇನ್ನೂ ನನಸಾಗಿಲ್ಲ. ಅವರು ರೂಪಿಸಿದ ಕಾಯ್ದೆಗಳು ಸರಿಯಾಗಿ ಪಾಲನೆಯಾಗದೆ, ಮೀಸಲಾತಿ ಲಾಭ ಅಷ್ಟಕಷ್ಟೇ ಇದೆ. ಶಿಕ್ಷಣ, ರಾಜಕೀಯ ಮಟ್ಟದಲ್ಲಿ ಅವರ ಕನಸು ಅನುಷ್ಠಾನಗೊಳ್ಳಬೇಕು ಎಂದು ಹೇಳಿದರು.


ಗುರುಪುರ ಪಂಚಾಯತ್ ಪಿಡಿಒ ಪಂಕಜಾ ಸ್ವಾಗತಿಸಿ, ನಿರೂಪಿಸಿದರು. ಪಂಚಾಯತ್ ಉಪಾಧ್ಯಕ್ಷ ದಾವೂದ್ ಬಂಗ್ಲೆಗುಡ್ಡೆ, ಹಿರಿಯ ನಾಗರಿಕರಾದ ಡೊಂಬಯ್ಯ, ಶೀನ, ರಾಮ ಮುಖಾರಿ, ಪಂಚಾಯತ್ ಸದಸ್ಯರು, ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article