
ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ
Tuesday, March 4, 2025
ಕಾಪು: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಈ ಕುರಿತಂತೆ ಸಂಸದ ಬ್ರಿಜೇಶ್ ಚೌಟ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಮತ್ತು ಸಂಸದೆ ಕಂಗನಾ ರನೌತ್ ಅವರೊಂದಿಗೆ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ ಎಂದು ಬರೆದುಕೊಂಡಿದ್ದಾರೆ.