
ವೆಬ್ ನ್ಯೂಸ್ ವಿರುದ್ಧ ಕಾಂಗ್ರೆಸ್‌ನಿಂದ ಠಾಣೆಗೆ ದೂರು
ಕಾರ್ಕಳ: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯನ್ನು ಅವಮಾನಿಸಿ ಸುದ್ದಿ ಪ್ರಕಟಿಸಿರುವ ನ್ಯೂಸ್ ಕಾರ್ಕಳ ಎಂಬ ವೆಬ್ ಚಾನೆಲ್‌ನ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದೆ.
ಕೋಟ್ಯಾಂತರ ಜನರು ಫಲಾನುಭಾವಿಗಳಾಗಿರುವ ಗ್ಯಾರಂಟಿ ಯೋಜನೆಯನ್ನು ಹುಚ್ಚು ಯೋಜನೆ ಎಂದು ಮತ್ತು ಗ್ಯಾರಂಟಿ ಯೋಜನೆಯ ಬಗ್ಗೆ ಅವಹೇಳನಕಾರಿಯಾಗಿ ಆಕ್ಷೇಪಾರ್ಹ ಪದ ಬಳಕೆಯ ವಿರುದ್ಧ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು. ಮುಂದೆ ಇಂತಹ ಅವಹೇಳನ ಸುದ್ದಿ ಪ್ರಕಟಿಸಿದರೆ ನ್ಯೂಸ್ ಚಾನಲ್ ಕಚೇರಿ ಮುಂಬಾಗದಲ್ಲೇ ಪ್ರತಿಭಟಿಸುವ ಎಚ್ಚರಿಕೆಯನ್ನು ನೀಡಿದರು.
ಈ ವೆಬ್ ನ್ಯೂಸ್ ಚಾನಲ್ ವಿರುದ್ಧ ಅಸಮಾಧಾನಗೊಂಡ ಕಾಂಗ್ರೆಸ್ ಕಾರ್ಯಕರ್ತರು ನ್ಯೂಸ್ ಕಾರ್ಕಳ ವೆಬ್ ನ್ಯೂಸ್ ಎಲ್ಲಾ ನ್ಯೂಸ್ ಲಿಂಕ್‌ನಿಂದ ಹೊರ ಬಂದು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರ ಠಾಣೆಗೆ ತೆರಳಿ ಮನವಿ ಸಲ್ಲಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಹಾಗೂ ಸಮಿತಿಯ ಸದಸ್ಯರು ಹಾಗೂ ಕೆ.ಎಮ್.ಎಫ್. ಅಧ್ಯಕ್ಷ ಸುಧಾಕರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ, ಮಲಿಕ್ ಅತ್ತುರ್, ಗ್ರಾಮೀಣ ಸಮಿತಿ ಅಧ್ಯಕ್ಷ ಸುಬೋದ್ ಶೆಟ್ಟಿ, ರುಕ್ಮಯ ಶೆಟ್ಟಿಗಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ್ ಮಿಯ್ಯಾರು, ಜಾಲತಾಣದ ಅದ್ಯಕ್ಷ ಸಂತೋಷ್ ದೇವಾಡಿಗ, ನಗರ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಭೂ ನ್ಯಾಯ ಮಂಡಳಿಯ ಸದಸ್ಯ ಸುನಿಲ್ ಭಂಡಾರಿ, ಪುರಸಭಾ ಸದಸ್ಯ ವಿವೇಕಾನಂದ ಶೆಣೈ, ಪ್ರತಿಮಾ ರಾಣೆ, ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಮಂಜುನಾಥ್ ಜೋಗಿ, ಮಹಿಳಾ ಪದಾಧಿಕಾರಿಗಳಾದ ಶೋಭಾ ಪ್ರಸಾದ್, ಆಶಾ ಬೈಲೂರು, ಕಾಂತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.