ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲಿಗೆ ಭೇಟಿ

ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲಿಗೆ ಭೇಟಿ


ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟ ನಿರ್ದೇಶಕ ರಿಷಬ್ ಶೆಟ್ಟಿ ಪತ್ನಿ ಮಕ್ಕಳೊಂದಿಗೆ ಭೇಟಿ ನೀಡಿದರು. 

ಈ ಸಂದರ್ಭದಲ್ಲಿ ದುರ್ಗೆಗೆ ಸೀರೆಯ ಸೇವೆ ಅರ್ಪಿಸಿದರು. ದೇವರ ಶೇಷ ವಸ್ತ್ರ ನೀಡಲಾಯಿತು. ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ, ಸದಾನಂದ ಆಸ್ರಣ್ಣ, ಶ್ರೀಕರ ಆಸ್ರಣ್ಣ ಉಪಸ್ಥಿತರಿದ್ದರು. 

ಈ ಸಂದರ್ಭ ಮಾತನಾಡಿದ ರಿಷಭ್ ಶೆಟ್ಟಿ ಅವರು, ಕಾಂತಾರ 2 ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ಭೇಟಿ ಮಾಡುತ್ತಿದ್ದೇನೆ

ಅಕ್ಟೋಬರ್ 2 ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ಮಾಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಕೆಶಿ ವಾರ್ನಿಂಗ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದು ನಾನು ಚಿತ್ರದ ಶೂಟಿಂಗ್‌ನಲ್ಲಿದ್ದೇನೆ ಆ ಬಗ್ಗೆ ಗೊತ್ತಿಲ್ಲ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article