
ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ: 20 ಬೈಕ್ ವಶಕ್ಕೆ
Saturday, March 1, 2025
ಮಂಗಳೂರು: ಜಿಲ್ಲೆಯಲ್ಲಿ ಬೈಕ್‌ಗಳನ್ನು ನಿರಂತರವಾಗಿ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಮಂಗಳೂರಿನ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪ್ರಮುಖ ಆರೋಪಿ ಶಿವಮೊಗ್ಗ ಜಿಲ್ಲೆಯ ಸೊರಬದ ಮಣಿಕಂಠ ಗೌಡ ಕೆ. (24) ಎಂದು ಗುರುತಿಸಲಾಗಿದೆ.
ಬಂಧಿತ ಮಣಿಕಂಠ ಗೌಡನಿಂದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಜಾತ್ರೆ, ಕಂಬಳೋತ್ಸವ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗಿರುವ ಬೈಕ್‌ಗಳನ್ನು ಕದಿಯುತ್ತಿದ್ದ ಖದೀಮ, ವಾಹನಗಳ ಇಗ್ನಿಷನ್ ಸಾಕೆಟ್‌ನ ಪ್ಲಗನ್ನು ಚಾಕಚಕ್ಯತೆಯಿಂದ ತಪ್ಪಿಸಿ, ಕ್ಷಣಾರ್ಧದಲ್ಲಿ ಕಳ್ಳತನ ಮಾಡಿಕೊಂಡು ಹೋಗುತಿದ್ದ. ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ಗಳಿಗೆ ರೀಸೇಲ್ ವ್ಯಾಲ್ಯೂ ಇರುವುದರಿಂದ ಅದನ್ನೇ ಟಾರ್ಗೆಟ್ ಮಾಡುತ್ತಿದ್ದ ಮಣಿಕಂಠ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಕುಟುಂಬದೊಂದಿಗೆ ಮೂಡಬಿದಿರೆಯಲ್ಲಿ ವಾಸ್ತವವ್ಯವಿದ್ದ ಎಂದು ತಿಳಿದುಬಂದಿದೆ.
ಕದ್ದ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದ ಕಾರ್ಕಳದ ಸತೀಶ್ ಬಂಗೇರ, ಮೂಡಬಿದಿರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬರನ್ನು ಪೊಲೀಸರು ಬಂಧಿಸಿದ್ದಾರೆ.