
ವಿಧಾನಸಭೆಯಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ-2024 ವಿರುದ್ಧ ನಿರ್ಣಯ’ ಸ್ವಾಗತರ್ಹ
ಮಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ-2024 ವಿರುದ್ಧ ನಿರ್ಣಯ’ ಅಂಗೀಕಾರ ಮಾಡಿರುವುದು ಸ್ವಾಗತಾರ್ಹ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇದೇ ರೀತಿ ಕಾಂಗ್ರೆಸ್ ಪಕ್ಷದ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಇಂತಹ ನಿರ್ಣಯವನ್ನು ಆಯಾ ವಿಧಾನಸಭೆಗಳಲ್ಲಿ ಅಂಗೀಕರಿಸುವಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ತಮ್ಮ ಪಕ್ಷದ ಸರ್ಕಾರಗಳಿಗೆ ಸೂಚನೆ ನೀಡಬೇಕು. ಅದೇ ರೀತಿ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲೂ ಇಂತಹ ನಿರ್ಣಯ ಅಂಗೀಕರಿಸುವಂತೆ ಅಲ್ಲಿನ ಸರ್ಕಾರಗಳನ್ನು ಇಂಡಿಯಾ ಮೈತ್ರಿ ಕೂಟ ಪ್ರಯತ್ನಿಸಬೇಕು ಎಂದು ಅವರು ಅಗ್ರಹಿಸದ್ದಾರೆ.
ಮತಾಂತರ ನಿಷೇಧ ಕಾನೂನು, ಮತ್ತು ರೈತರ ಹಿತದೃಷ್ಟಿಯಿಂದ ಗೋಹತ್ಯೆ ವಿಧೇಯಕವನ್ನು ಕೂಡಲೇ ರಾಜ್ಯ ಸರ್ಕಾರವು ರದ್ದುಗೊಳಿಸಿ ಶೋಷಿತ ವರ್ಗಗಳ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ಮೂಲಕ ನ್ಯಾಯ ಕೊಡಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.