
ಮಾ.27-30 ರವರೆಗೆ ಪಡು ಭಟ್ರಕೋಡಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶ
ಮಂಗಳೂರು: ನೀರುಮಾರ್ಗ ಸಮೀಪದ ಪಡು ಭಟ್ರಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಠಾಬಂಧ ಬ್ರಹ್ಮಕಲಶೋತ್ಸವ ಮಾ.27ರಂದು ಆರಂಭಗೊಂಡು ಮಾ.30ರವರೆಗೆ ಬ್ರಹ್ಮರ್ಷಿ ವೇದಮೂರ್ತಿ ಕುಡುಪು ಶ್ರೀ ನರಸಿಂಹ ತಂತಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
ಅವರು ಇಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಮಾ.27ರಿಂದ ಬೆಳಗ್ಗೆ 8 ಗಂಟೆಯಿಂದ ಆಚರ್ಯಾದಿ ಋತ್ವಿಜರ ಆಗಮನ, ಸಾಮೂಹಿಕ ದೇವತಾ ಪ್ರಾರ್ಥನೆ, ಗಣಪತಿ ಹೋಮ, 11 ಗಂಟೆಯಿಂದ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಂಜೆ ಗಂಟೆ 6 ಗಂಟೆಯಿಂದ ಆಚಾರ್ಯಾದಿ ಋತ್ವಿಗ್ವರಣ ಪ್ರಾಸಾರ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ. ರಾತ್ರಿ ಗಂಟೆ 7.30ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದರು.
ಮಾ.28ರಂದು ಬೆಳಗ್ಗೆ 6 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು. ಚಂಡಿಕಾಯಾಗ ಆರಂಭ. ಮಧ್ಯಾಹ್ನ ಗಂಟೆ 12 ಗಂಟೆಗೆ ಚಂಡಿಕಾಯಾಗದ ಪೂರ್ಣಾಹುತಿ ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ ಗಂಟೆ 6 ಗಂಟೆಯಿಂದ ದುರ್ಗಾನಮಸ್ಕಾರ ಪೂಜೆ, ಧಾರ್ಮಿಕ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಲಿದೆ.
ಮಾ.29ರಂದು ಬೆಳಗ್ಗೆ 6 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮ, ರಾತ್ರಿ ಗಂಟೆ 7.30ರಿಂದ ಅನ್ನಸಂತರ್ಪಣೆ ನಡೆಯಲಿದೆ.
ಮಾ.30ರಂದು ಬೆಳಗ್ಗೆ 8.30ರಿಂದ ಶ್ರೀ ದೇವರಿಗೆ ಕಲಶಾಭಿಷೇಕ ಪ್ರಾರಂಭವಾಗಲಿದೆ. ಬೆಳಗ್ಗೆ 9.10ರಿಂದ ವೃಷಭ ಲಗ್ನ ಸುಮುಹೂರ್ತದಲ್ಲಿ 10.10ರ ಸಮಯ ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ‘ಬ್ರಹ್ಮಕಲಶಾಭಿಷೇಕ’ ಪ್ರಸನ್ನ ಪೂಜೆ, ರಕ್ತಶ್ವರೀ ಪ್ರತಿಷ್ಟೆ ಕಲಶಾಭಿಷೇಕ, ಬೆಳಗ್ಗೆ ಗಂಟೆ 11.30ಕ್ಕೆ ಶ್ರೀ ದೇವರಿಗೆ ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ ಗಂಟೆ 12 ಗಂಟೆಗೆ ಮಹಾ ಅನ್ನಸಂತರ್ಪಣೆ, ವೈದಿಕ ಮಂತ್ರಾಕ್ಷತೆ ನಡೆಯಲಿದೆ. ಸಂಜೆ ಗಂಟೆ 6 ಗಂಟೆಗೆ ಶ್ರೀ ದೇವರಿಗೆ ರಂಗಪೂಜೆ, ರಾತ್ರಿ ಗಂಟೆ 7.30ರಿಂದ ಅನ್ನಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.