
ಮಾ.7 ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ತರಬೇತಿ ಕಾರ್ಯಕ್ರಮ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ವತಿಯಿಂದ ಕನ್ನಡ ಸಂಗ್ರಾಮ, ಉದ್ಯೋಗ ಮತ್ತು ವೃತ್ತಿ ಸಮಾಲೋಚನೆ ವಿಭಾಗದ ಸಹಯೋಗದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹೋಬಳಿಯ ಸಹಯೋಗದಲ್ಲಿ ಮಾ.7 ರಂದು ವಿದ್ಯಾರ್ಥಿಗಳಿಗೆ ತಮ್ಮ ಮುಂಬರುವ ಪರೀಕ್ಷೆಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ತರಬೇತಿ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಶಿವರಾಮ ಕಾರಂತ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ರಾಜು ಮೊಗವೀರ ಉದ್ಘಾಟಿಸಲಿದ್ದಾರೆ. ದ.ಕ. ಕಸಾಪ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಯಾಗಿ ಕೊಡಗು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮಿಲಕಿ ಕೆ. ಭರತ್ ಭಾಗವಹಿಸಲಿದ್ದು, ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಎಲ್. ಲಕ್ಷ್ಮೀ ದೇವಿ, ಕಸಾಪ ಕೇಂದ್ರೀಯ ಕಾರ್ಯಕಾರಿ ಸಮಿತಿ ಬೆಂಗಳೂರು ಇದರ ಸದಸ್ಯ ಡಾ. ಮಾಧವ ಎಂ.ಕೆ., ಮಂಗಳೂರು ಘಟಕ ಕಸಾಪ ಅಧ್ಯಕ್ಷ ರೇಮಂಡ್ ಡಿಕುನ್ಹಾ ತಾಕೋಡೆ ಅವರೊಂದಿಗೆ ಸಂಘದ ವತಿಯಿಂದ ಕಾರ್ಯಕ್ರಮ ನಡೆಯಲಿದೆ.