9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶನ ಸಹಚರನ ಸೆರೆ: ಮಾದಕ ವಸ್ತು ಎಂಡಿಎಂಎ ವಶ

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶನ ಸಹಚರನ ಸೆರೆ: ಮಾದಕ ವಸ್ತು ಎಂಡಿಎಂಎ ವಶ


ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರರನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಆತನ ವಶದಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಕೇರಳದ ಕಾಸರಗೋಡು ಜಿಲ್ಲೆಯ ಮೊಗ್ರಾಲ್‌ನ ನಾಂಗಿ ಕಡಪ್ಪುರಂ ನಿವಾಸಿ ಅಬ್ದುಲ್ ಅಸೀರ್ ಯಾನೆ ಸದ್ದು ಯಾನೆ ಸಾದು ಯಾನೆ ಮಾಯ (32) ಎಂದು ಗುರುತಿಸಲಾಗಿದೆ.

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರನೋರ್ವನು ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ಮಂಗಳೂರು ನಗರದ ನಂತೂರು ಪರಿಸರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನಲ್ಲಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ 53 ಗ್ರಾಂ. ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿನ ರಾಜಧಾನಿ ಜ್ಯುವೆಲರ್ಸ್‌ಗೆ ಶೂಟೌಟ್ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದನು ನ್ಯಾಯಾಲಯದಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದವನು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಈತನ ವಿರುದ್ಧ ವಾರಂಟ್ ಜಾರಿಯಲ್ಲಿದೆ.

ಪತ್ತೆ ಕಾರ್ಯಚರಣೆಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ಮಾರ್ಗದರ್ಶನದಲ್ಲಿ, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ಕೆ. ರವಿಶಂಕರ್ ಅವರ  ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ., ಪಿಎಸ್‌ಐ ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ., ನರೇಂದ್ರ ಹಾಗೂ ಎಎಸ್‌ಐಗಳಾದ ಮೋಹನ್ ಕೆ.ವಿ., ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಗಳು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article