ಎನ್‌ಸಿಸಿ ಕೆಡೆಟ್‌ಗಳಿಗೆ ಸನ್ಮಾನ

ಎನ್‌ಸಿಸಿ ಕೆಡೆಟ್‌ಗಳಿಗೆ ಸನ್ಮಾನ


ಮಂಗಳೂರು: ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸುವಲ್ಲಿ ಗಮನಾರ್ಹ ಸಮರ್ಪಣೆ ಮತ್ತು ಶಿಸ್ತನ್ನು ತೋರಿಸಿರುವ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಜೂನಿಯರ್ ಮತ್ತು ಸೀನಿಯರ್ ವಿಂಗ್ 71 ಎನ್‌ಸಿಸಿ ಕೆಡೆಟ್‌ಗಳ ಅಪ್ರತಿಮ ಸಾಧನೆಗಳನ್ನು ಗೌರವಿಸಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಸನ್ಮಾನ ಸಮಾರಂಭ ನಡೆಯಿತು. 

ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಶಿಬಿರಗಳಲ್ಲಿ ಈ ಕೆಡೆಟ್‌ಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ನಾಯಕತ್ವ ಕೌಶಲ್ಯಗಳನ್ನು ಪ್ರದರ್ಶಿಸಿದ್ದಕ್ಕಾಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  

ಎನ್‌ಸಿಸಿ ಮಂಗಳೂರು ಗ್ರೂಪ್ ಆಯೋಜಿಸಿದ್ದ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್, ಎನ್‌ಸಿಸಿ ಮಂಗಳೂರು ಗ್ರೂಪ್ನ ಗ್ರೂಪ್ ಕಮಾಂಡರ್ ಕರ್ನಲ್ ವಿರಾಜ್ ಕಾಮತ್, 18 ಕಾರ್ ಬಿಎನ್ ಎನ್ಸಿಸಿ ಮಂಗಳೂರು ಕಮಾಂಡಿಂಗ್ ಆಫೀಸರ್ ಕರ್ನಲ್ ಗ್ರೇಷಿಯನ್ ಸಿಕ್ವೇರಾ, ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನ ರಿಜಿಸ್ಟ್ರಾರ್ ಡಾ. ಅಲ್ವಿನ್ ಡೇಸಾ, ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರೊನಾಲ್ಡ್ ನಜರೆತ್ ಮತ್ತು ವಿಶ್ವವಿದ್ಯಾಲಯದ ಸಾಂಸ್ಥಿಕ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಡಿಸೋಜಾ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article