
ವಿದ್ಯಾರ್ಥಿಗಳಿಗೆ ಉದ್ಯೋಗ ಅಗತ್ಯತೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ
Friday, March 7, 2025
ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸಂಘದ ದಶಮಾನೋತ್ಸವದ ಅಂಗವಾಗಿ ಮಾ.7 ರಂದು ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಉದ್ಯೋಗ ಕೋಶದ ಸಹಭಾಗಿತ್ವದಲ್ಲಿ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ಉದ್ಯೋಗ ಅಗತ್ಯತೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್ಮೆಂಟ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮೋನಿಷಾ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಸಂವಾದ ನಡೆಸಿದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕ ನಾಗರಾಜ್ ಎಂ., ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್, ಕಾರ್ಯದರ್ಶಿ ತುಷಾರ್ ಕೆ., ಉದ್ಯೋಗ ಕೋಶದ ಸಂಯೋಜಕಿ ಡಾ. ಮಾಲತಿ ಕೆ., ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅಕ್ಷತಾ ಹಾಗೂ ಸುಮಾರು 170ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.