
ನಾಳೆ ರೆಡ್‌ಕ್ರಾಸ್ ಸೊಸೈಟಿಯಿಂದ ಮಹಿಳಾ ದಿನಾಚರಣೆ
ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವತಿಯಿಂದ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐಕ್ಯುಎಸಿ, ಸಮಾಜಶಾಸ್ತ್ರ ವಿಭಾಗ, ಯೂತ್ ರೆಡ್‌ಕ್ರಾಸ್ ಮತ್ತು ಎನ್‌ಎಸ್‌ಎಸ್ ಘಟಕ ಹಾಗೂ ಸುಶೇಗ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮಾ.8 ರಂದು ಬೆಳಗ್ಗೆ 10ಕ್ಕೆ ವಿಶ್ವ ಮಹಿಳಾ ದಿನಾಚರಣೆ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಅವೆ ಮರಿಯ ಪೆಲೆಟಿವ್ ಕೇರ್‌ನ ನಿರ್ದೇಶಕಿ ಡಾ.ಲವೀನಾ ನೊರೊನ್ಹಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್ ಬಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಿ.ವಿ. ಯೂತ್ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ. ಗಾಯತ್ರಿ.ಎನ್., ಕಾಲೇಜಿನ ಐಕ್ಯುಎಸಿ ಸಂಯೋಜಕಿ ಡಾ. ಮಂಜುಳಾ ಮಲ್ಯ, ಯೂತ್ ರೆಡ್‌ಕ್ರಾಸ್ ಅಧಿಕಾರಿ ಡಾ. ರಾಜೇಶ್ ಶೆಟ್ಟಿ, ಮಹಿಳಾ ಸೆಲ್‌ನ ಸಂಯೋಜಕಿ ಸುಜಾತ.ಪಿ.ಎಸ್., ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ. ಮೀನಾಕ್ಷಿ ಆಚಾರ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಳಿಕ ಆತ್ಮಹತ್ಯೆ ತಡೆಗಟ್ಟುವಿಕೆ ವಿಷಯದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಲಿದ್ದು ಡಾ.ಝೀನಾ ಫ್ಲೇವಿಯಾ ಡಿಸೋಜ, ವೀಣಾ ಬರ್ನೆಸ್ ಮತ್ತು ಶಾಲಿನಿ ಡಿಸೋಜಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕೌನ್ಸೆಲಿಂಗ್ ಮತ್ತು ಹದಿಹರೆಯದ ಮಾನಸಿಕ ಆರೋಗ್ಯ ವಿಷಯದ ಸರ್ಟಿಫಿಕೆಟ್ ಕೋರ್ಸ್ ಪೂರೈಸಿದ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಇದೇ ಸಂದರ್ಭ ಪ್ರಮಾಣಪತ್ರ ವಿತರಿಸಲಾಗುವುದೆಂದು ಕಾರ್ಯಕ್ರಮದ ಸಂಯೋಜಕಿ ಡಾ. ಸುಮನಾ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.