
ಡ್ರಗ್ಸ್ ಜಾಲ ಭೇದಿಸಿದ ಪೊಲೀಸರಿಗೆ ವಿಹೆಚ್‌ಪಿ ಅಭಿನಂದನೆ
Monday, March 17, 2025
ಮಂಗಳೂರು: ಮಂಗಳೂರು ಪೊಲೀಸರು ಕಾರ್ಯಾಚರಿಸಿ ರಾಜ್ಯದ ಇತಿಹಾಸದಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಅವರನ್ನು ವಿಶ್ವ ಹಿಂದೂ ಪರಿಷದ್ ಅಭಿನಂದಿಸಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಿದೇಶಿ ಆರೋಪಿಗಳನ್ನು ಸಿಸಿಬಿ ವಶಕ್ಕೆ ಪಡೆದು, ಅವರ ಬಳಿಯ ಎರಡು ಟ್ರಾಲಿ ಟ್ರಾವೆಲ್ ಬ್ಯಾಗ್‌ನಲ್ಲಿ ತಂದಿದ್ದ 75 ಕೋಟಿ ಮೌಲ್ಯದ 37.878 ಕೆ.ಜಿ ಎಂಡಿಎಂಎ ಜಪ್ತಿ ಮಾಡಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ಸಿಸಿಬಿ ಪೋಲೀಸರ ತಂಡಕ್ಕೆ ಅಭಿನಂದನೆಗಳು. ಯುವಜನತೆಯನ್ನು ಹಾಳುಮಾಡುವ ಈ ಡ್ರಗ್ಸ್ ವಿರುದ್ಧ ವಿಶ್ವ ಹಿಂದೂ ಪರಿಷದ್ ಜನಜಾಗ್ರತಿ ಅಭಿಯಾನವನ್ನು ನಿರಂತರವಾಗಿ ನಡೆಸುತ್ತಿದ್ದು, ಯುವ ಜನರಲ್ಲಿ ಡ್ರಗ್ಸ್ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಈ ದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿ, ಆರೋಪಿಗಳನ್ನು ಬಂಧಿಸಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದರು.