.jpeg)
ಅಪ್ರಾಪ್ತ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ-ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ: ಶಾಸಕ ಕಾಮತ್
Saturday, March 1, 2025
ಮಂಗಳೂರು: ಫರಂಗಿಪೇಟೆಯ ಅಪ್ರಾಪ್ತ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ಎಷ್ಟರಮಟ್ಟಿಗೆ ಸೋತು ಹೋಗಿದೆ ಎಂಬುದರ ಸತ್ಯ ದರ್ಶನವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಯ ನಾಪತ್ತೆಯ ಹಿಂದೆ ಗಾಂಜಾ, ಡ್ರಗ್ಸ್ ನಂತಹ ಸಮಾಜದ್ರೋಹಿ ಶಕ್ತಿಗಳ ಕೈವಾಡ ಇರುವ ಬಗ್ಗೆ ಪೋಷಕರು, ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು ಪೊಲೀಸರಿಗೆ ಮೊದಲೇ ಎಚ್ಚೆತ್ತುಕೊಂಡಿದ್ದರೆ ಪರಿಸ್ಥಿತಿ ಈ ಮಟ್ಟಕ್ಕೆ ಹೋಗುತ್ತಿರಲಿಲ್ಲ. ಈಗಾಗಲೇ ಜಿಲ್ಲೆಯಾದ್ಯಂತ ಗಾಂಜಾ, ಡ್ರಗ್ಸ್ ಪೆಡ್ಲರ್ ಗಳ ಹಾವಳಿ ಹೆಚ್ಚಾಗಿದ್ದು ಯುವ ಸಮುದಾಯದ ಭವಿಷ್ಯ ಆತಂಕಕ್ಕೀಡಾಗಿದೆ. ಆದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಮನ ಹರಿಸದೇ, ಇವೆಲ್ಲ ಸರ್ವೇ ಸಾಮಾನ್ಯ ಎಂಬಂತೆ ವರ್ತಿಸುತ್ತಿರುವುದು ದುರಂತ ಎಂದರು.
ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಯಾವ ಒತ್ತಡಕ್ಕೂ ಒಳಗಾಗದೇ ಸರಿಯಾದ ತನಿಖೆ ನಡೆಸಬೇಕು. ಆಗಲೇ ಬಾಲಕನ ನಾಪತ್ತೆಯ ಕುರಿತು ಸ್ಪಷ್ಟ ಚಿತ್ರಣ ಹೊರ ಬರಲಿದೆ. ಎಲ್ಲಾ ಸಂದರ್ಭದಲ್ಲೂ ಹಿಂದೂ ಸಮಾಜ ಪ್ರತಿಭಟನೆ ನಡೆಸಿದರೆ ಮಾತ್ರ ನ್ಯಾಯ ಎನ್ನುವ ವಾತಾವರಣ ಇನ್ನು ಮೇಲೆಯಾದರೂ ನಿಲ್ಲಬೇಕು ಎಂದು ಶಾಸಕರು ಇದೇ ವೇಳೆ ಆಗ್ರಹಿಸಿದರು.