
ವೇದವ್ಯಾಸ ಕಾಮತ್ ಶಾಸಕ ಸ್ಥಾನಕ್ಕೆ ಅಗೌರವ ತಂದಿದ್ದಾರೆ
Monday, March 3, 2025
ಮಂಗಳುರು: ಮಂಗಳೂರಿನ ಶಕ್ತಿನಗರದಲ್ಲಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಯಶವಂತ್ ಪ್ರಭು ಎಂಬವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆಗೈದಿರುವ ಘಟನೆ ತೀವ್ರ ಖಂಡನೀಯ. ಪವಿತ್ರ ಧಾರ್ಮಿಕ ಕ್ಷೇತ್ರದಲ್ಲಿ ಬೇಜವಾಬ್ದಾರಿ ನಡೆ ಹಾಗೂ ಗೂಂಡಾ ವರ್ತನೆ ತೋರಿರುವ ವೇದವ್ಯಾಸ ಕಾಮತ್ ಶಾಸಕ ಸ್ಥಾನಕ್ಕೆ ಅಗೌರವ ತಂದಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕರ್ತರಿಗೆ ಬುದ್ಧಿ ಹೇಳಿ ಅವರಿಗೆ ಮಾರ್ಗದರ್ಶನ ನೀಡಬೇಕಾಗಿದ್ದ ಜವಾಬ್ದಾರಿಯುತ ಸ್ಥಾನದಲ್ಲಿರುವ ವೇದವ್ಯಾಸ ಕಾಮತ್ ಅವರೇ ಗೂಂಡಾ ಪ್ರವೃತ್ತಿಗೆ ಪ್ರಚೋದನೆ ನೀಡಿದ್ದಾರೆ. ಹಲ್ಲೆಗೊಳಗಾದ ಕಾರ್ಯಕರ್ತನಿಗೆ ನ್ಯಾಯ ದೊರಕಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಶೀಘ್ರವೇ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಆಗ್ರಹಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.