ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ: ವೆಲ್ಫೇರ್ ಪಾರ್ಟಿ

ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ: ವೆಲ್ಫೇರ್ ಪಾರ್ಟಿ

ಮಂಗಳೂರು: ಬಸ್, ಮೆಟ್ರೋ, ವಿದ್ಯುತ್ ದರ ಸೇರಿದಂತೆ ಈಗ ನೀರಿನ ದರ ಏರಿಕೆಗೂ ರಾಜ್ಯ ಸರ್ಕಾರವೇ ಪ್ರಸ್ತಾಪ ಮಾಡಿದ್ದು, ಕಾಂಗ್ರೆಸ್ ಸರಕಾರ ಬೆಲೆ ಏರಿಕೆ ನಿಯಂತ್ರಣದಲ್ಲಿ ವಿಫಲವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಸರ್ಕಾರವನ್ನು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಕಡೆಗೆ ಸಾಗುತ್ತಿತ್ತು ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಇದರಿಂದ ಸಾಮಾನ್ಯ ಜನರ ಜೀವನದ ಮೇಲೆ ವಿಪರೀತ ಪರಿಣಾಮ ಬೀರುತ್ತಿದೆ ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನಿಜವಾಗಿಯೂ ಅಹಿಂದ ನಾಯಕರೆ ಆಗಿದ್ದರೇ ಹಿಂದುಳಿದ ವರ್ಗಗಳ ಅಭಿವೃದ್ಧಿ ಮಾಡಲಿ, ಬಡವರ ಉದ್ದಾರ ಮಾಡಲಿ, ನಿರಂತರ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಜೀವನ ನಡೆಸುವುದು ತುಂಬಾ ಕಷ್ಟವಾಗುತ್ತಿದೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮದಿಂದ ಹಿಂದೆ ಸರಿದು ರಾಜ್ಯದ ಜನತೆಗೆ ನೆಮ್ಮದಿಯಾಗಿ ಬದುಕುವ ದಾರಿ ಮಾಡಿಕೊಡಬೇಕು ಎಂದು ಆವರು ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article