ವೆನ್‌ಲಾಕ್, ಲೇಡಿಗೋಷನ್‌ಗೆ ಆರೋಗ್ಯ ಆಯುಕ್ತರ ಭೇಟಿ

ವೆನ್‌ಲಾಕ್, ಲೇಡಿಗೋಷನ್‌ಗೆ ಆರೋಗ್ಯ ಆಯುಕ್ತರ ಭೇಟಿ


ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್‌ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿದರು.

ಮೊದಲು ವೆನ್‌ಲಾಕ್‌ಗೆ ಆಗಮಿಸಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ದೊರಕುತ್ತಿರುವ ಸೌಲಭ್ಯಗಳ ಮಾಹಿತಿ ಪಡೆದ ಅವರು, ಸ್ವಚ್ಛತೆ ಮತ್ತು ಆಸ್ಪತ್ರೆ ಪರಿಸರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೆನ್‌ಲಾಕ್ ಮೂಲಸೌಕರ್ಯವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಸಿಬ್ಬಂದಿ ನೇಮಕಾತಿಯ ಬಗ್ಗೆ ಬೇಡಿಕೆ ಬಂದಿದ್ದು, ಸರಕಾರದ ಮಟ್ಟದಲ್ಲಿ ಇದನ್ನು ಪರಿಶೀಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು. 


ಬಳಿಕ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್‌ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಲೇಡಿಗೋಷನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಮತ್ತಿತರರು ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article