ಮಹಿಳಾ ಕಾಂಗ್ರೆಸ್ ವತಿಯಿಂದ ಪೊಲೀಸ್ ಆಯುಕ್ತರಿಗೆ ಅಭಿನಂದನೆ

ಮಹಿಳಾ ಕಾಂಗ್ರೆಸ್ ವತಿಯಿಂದ ಪೊಲೀಸ್ ಆಯುಕ್ತರಿಗೆ ಅಭಿನಂದನೆ


ಮಂಗಳೂರು: ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಿಸಿಬಿ ಪೊಲೀಸರು ಬೃಹತ್ ಪ್ರಮಾಣದಲ್ಲಿ ಮಾದಕ ವಸ್ತುವನ್ನು ವಶಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತರನ್ನು ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಯೋಗ ಭೇಟಿಯಾಗಿ ಸೋಮವಾರ ಅಭಿನಂದಿಸಿತು.

ಈ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಶಾಲೆಟ್ ಪಿಂಟೋ ಮಾತನಾಡಿ, ಮಂಗಳೂರಿನ ಸಿಸಿಬಿ ಪೊಲೀಸರ ತಂಡ ಬೃಹತ್ ಮಾದಕ ಜಾಲವನ್ನು ಭೇದಿಸಿ ರಾಜ್ಯ ಮತ್ತು ಜಿಲ್ಲೆಯ ಯುವಕರ ಬದುಕಿಗೆ ಮಾರಕವಾಗಿದ್ದ ಬಹುದೊಡ್ಡ ಅಪಾಯವೊಂದನ್ನು ತಪ್ಪಿಸಿದೆ. ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣ ಮತ್ತು ಸ್ವಸ್ಥ ಪರಿಸರ ಕಟ್ಟಿಕೊಡಲು ರಾಜ್ಯ ಕಾಂಗ್ರೆಸ್ ಸಕರಕಾರ ಬದ್ಧವಾಗಿದೆ. ಸದ್ರಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಇಲಾಖೆಯನ್ನು ಗುರುತಿಸಿ ರಾಜ್ಯ ಸರ್ಕಾರದಿಂದ ಸೂಕ್ತ ಬಹುಮಾನ ನೀಡಲು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಸಿ.ಸಿ.ಆರ್.ಬಿ ಉಪ ಆಯುಕ್ತೆ ಗೀತಾ ಕುಲಕರ್ಣಿ, ಮಂಗಳೂರು ಪೊಲೀಸ್ ದಕ್ಷಿಣ ಉಪವಿಭಾಗ ಆಯುಕ್ತೆ ಧನ್ಯಾ ನಾಯಕ್, ಸಂಚಾರ ಪೊಲೀಸ್ ಮಂಗಳೂರು ನಗರ ಉಪವಿಭಾಗದ ಉಪ ಆಯುಕ್ತೆ ನಜ್ಮಾ ಫಾರೂಕಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸ್ವರೂಪ ಎನ್. ಶೆಟ್ಟಿ. ಗೀತಾ ಅತ್ತಾವರ, ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ ಕಾಮತ್, ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೂಪಾ ಚೇತನ್, ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಜಾತ ದೀಪಕ್, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಶಾಂತಲಾ ಗಟ್ಟಿ ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article