ಕರಾವಳಿಯಲ್ಲಿ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆ: ಬಿ.ಕೆ. ಇಮ್ತಿಯಾಜ್

ಕರಾವಳಿಯಲ್ಲಿ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆ: ಬಿ.ಕೆ. ಇಮ್ತಿಯಾಜ್


ಮಂಗಳೂರು: ಸಂಘ ಪರಿವಾರ ಸಂಘಟನೆಗಳು ನಿರಂತರ ಕೋಮು ಪ್ರಚೋದನಕಾರಿ ಭಾಷಣ ಗಳನ್ನು ಮಾಡುತ್ತಾ ಜಿಲ್ಲೆಯಲ್ಲಿ ಮತೀಯ ಸಂಘರ್ಷಕ್ಕೆ ಕುಮ್ಮಕ್ಕು ನೀಡುತ್ತಿದ್ದರೂ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ವಿಫಲರಾಗಿರುವುದೇ ಮತ್ತೆ ಮತ್ತೆ ಕೋಮು ಸಂಘರ್ಷ ಸೃಷ್ಟಿಸುವ ವಾತಾವರಣ ನಿರ್ಮಾಣ ಆಗುತ್ತಿದೆ ಎಂದು ಬಿ.ಕೆ. ಇಮ್ತಿಯಾಜ್ ಆರೋಪಿಸಿದರು.


ಸಾಮಾಜಿಕ ಹೋರಾಟಗಾರರ ಮೇಲೆ ಕೇಸು ದಾಖಲಿಸುವ ಪೊಲೀಸರಿಗೆ ಸಂಘ ಪರಿವಾರದವರ ಮೇಲೆ ಕೇಸು ದಾಖಲಿಸುವ ಧೈರ್ಯ ಯಾಕಿಲ್ಲ ಎಂದು ಪ್ರಶ್ನಿಸಿದರು. ಅವರು ದಿಗಂತ್ ನಾಪತ್ತೆ ಪ್ರಕರಣಕ್ಕೆ ಮತೀಯ ಬಣ್ಣ ಬಳಿದ ಬಿಜೆಪಿ ಕ್ರಮವನ್ನು ವಿರೋಧಿಸಿ, ಉದ್ರೇಕಕಾರಿ ಭಾಷಣ ಬಿಗಿದ ಬಿಜೆಪಿ ಶಾಸಕರುಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಇಂದು ನಗರದ ಕ್ಲಾಕ್ ಟವರ್‌ ಬಳಿ ನಡೆದ ಡಿವೈಎಫ್ಐ ಎಸ್ಎಫ್ಐ ಜೆ.ಎಮ್.ಎಸ್. ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.


ಚಕ್ರವರ್ತಿ ಸೂಲಿಬೆಲೆಗೆ ಜನಸಂಖ್ಯೆಯ ಅನುಪಾತದ ಅರಿವಿಲ್ಲ ಸಮಾಜ ಒಡೆಯಲು ಸುಳ್ಳು ಬೊಗಳೆ ಬಿಡುತ್ತಿದ್ದಾರೆ ಘರ್ ವಾಪಸಿ ಬಿಜೆಪಿ ಸಂಘ ಪರಿವಾರದ ಉನ್ನತ ನಾಯಕರ ಕುಟುಂಬಗಳಿಂದ ಮೊದಲು ಮಾಡಲಿ ಎಂದು ಆರೋಪಿಸಿದರು.


ಡಿವೈಎಫ್ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ ಸಂಘಪರಿವಾರ, ಬಿಜೆಪಿ ಶಾಸಕರು ವಿದ್ಯಾರ್ಥಿ ದಿಗಂತ್ ಪ್ರಕರಣದಲ್ಲಿ ಬೆತ್ತಲಾಗಿದ್ದರೆ. ಇವರು ಪ್ರತೀ ಬಾರಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನದಲ್ಲಿ ಮತೀಯ ಸಂಘರ್ಷಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ. ಉತ್ತರ ಕನ್ನಡದ ಪರಮೇಶ ಮೇಸ್ತ, ತೀರ್ಥಹಳ್ಳಿಯ ನಂದಿತಾ, ಕೊಣಾಜೆಯ ಕಾರ್ತಿಕ್ ರಾಜ್ ಈಗ ದಿಗಂತ್ ಪ್ರಕರಣಗಳೆಲ್ಲವನ್ನು ಗಮನಿಸಿದರೆ ಇವರ ನೈಜ್ಯ ಉದ್ದೇಶ ಬಯಲಾಗಿದೆ ಎಂದು ತಿಳಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ದ್ವೇಷ ಭಾಷಣ ನಡೆಸುವವರ ಮೇಲೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರೂ ಜಿಲ್ಲೆಯಲ್ಲಿ ಸಂಘಪರಿವಾದ ಮುಖಂಡರ ಮೇಲೆ ಒಂದೇ ಒಂದು ಪ್ರಕರಣ ದಾಖಲಿಸಲು ಹಿಂಜರಿಯುತ್ತಿರುವ ನಡೆ ಅತ್ಯಂತ ಖಂಡನೀಯ. ಪೊಲೀಸ್ ಇಲಾಖೆ ಕೂಡಲೇ ಶಾಸಕ‌ ಭರತ್ ಶೆಟ್ಟಿ, ಹರೀಶ್ ಪೂಂಜಾ ಮತ್ತು ಸಂಘಪರಿವಾರದ ನಾಯಕರ ಮೇಲೆ ಸುಮೋಟೋ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು. 


ಪ್ರತಿಭಟನೆಯನ್ನು ಉದ್ದೇಶಿಸಿ ಜೆಎಮ್ಎಸ್ ಜಿಲ್ಲಾ ಅಧ್ಯಕ್ಷೆ ಜಯಂತಿ ಬಿ. ಶೆಟ್ಟಿ, ಕಾರ್ಮಿಕ ಮುಖಂಡ ಸುನೀಲ್ ಕುಮಾರ್ ಬಜಾಲ್ ಮಾತನಾಡಿದರು.


ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರಾದ ರಿಜ್ವಾನ್ ಹರೇಕಳ, ರಝಾಕ್ ಮುಡಿಪು, ನವೀನ್ ಕೊಂಚಾಡಿ, ತಯ್ಯೂಬ್ ಬೆಂಗರೆ, ಜಗದೀಶ್ ಬಜಾಲ್, ಜೆಎಮ್ಎಸ್ ನ ಭಾರತೀ ಬೋಳಾರ, ಪ್ರಮೀಳಾ, ಅಸುಂತ ಡಿಸೋಜ, ಯೋಗಿತಾ, ಅಮ್ಮೆಮಾರ್ ಪಂಚಾಯತ್ ಮಾಜಿ ಸದಸ್ಯ ಹನೀಫ್, ಬಶೀರ್ ತಂಡೇಲ್, ವಿ.ಎಚ್ ಕರೀಂ, ಹೈದರ್ ಅಮ್ಮೆಮಾರ್,‌ಅಶ್ರಫ್ ಅಸ್ರ, ಬೀದಿಬದಿ ವ್ಯಾಪಾರ ಸಂಘಟನೆಯ ಮುಝಾಫರ್, ನೌಶದ್ ಕಣ್ಣೂರು, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಶೇಖರ್ ಕುಂದರ್, ಆಸೀಫ್ ಬಂದರು, ನೌಶದ್ ಬೆಂಗರೆ, ಯೋಗೀಶ್ ಜಪ್ಪಿನಮೊಗರು, ಅನ್ಸಾರ್ ಫೈಸಲ್ ನಗರ, ರಫೀಕ್ ಪಿ.ಜಿ, ಮುಹಾಝ್ ಮತ್ತಿತರರು ಉಪಸ್ಥಿತರಿದ್ದರು. 

ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು ಸ್ವಾಗತಿಸಿ, ಎಸ್ಎಫ್ಐ ಜಿಲ್ಲಾಧ್ಯಕ್ಷ ವಿನುಶ ರಮಣ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article