
ಬಿಜೆಪಿ ದಕ್ಷಿಣ ಮಹಿಳಾ ಮೋರ್ಚಾದಿಂದ ವಿಶ್ವ ಮಹಿಳಾ ದಿನಾಚರಣೆ: ಕೇಂದ್ರ ಸರ್ಕಾರದ ಮಹಿಳಾ ಯೋಜನೆ ಹಾಗೂ ಅಂಗಾಗ ದಾನ ಕಾರ್ಯಗಾರ
Saturday, March 8, 2025
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಗಾಂಗ ದಾನದ ಬಗ್ಗೆ ಮತ್ತು ಕೇಂದ್ರ ಸರ್ಕಾರದ ಮಹಿಳೆಯರಿಗೆ ಇರುವ ಯೋಜನೆಯ ಬಗ್ಗೆ ಮಾಹಿತಿಯನ್ನು ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ ಮಾತನಾಡಿ, ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನ ನೋಂದಣಿಯನ್ನು ಮಾಡುವ ಮೂಲಕ ಹಲವರ ಜೀವವನ್ನು ಉಳಿಸುವಲ್ಲಿ ಮಾದರಿಯಾಗಬೇಕಾಗಿ ತಿಳಿಸಿದರು.
ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ರಾವ್ ಅವರು ಕೇಂದ್ರ ಸರಕಾರದಿಂದ ಮಹಿಳೆಯರಿಗೆ ಸಿಗುವಂತಹ ಯೋಜನೆಯ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂರ್ಣಿಮಾ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಮಾಜಿ ಉಪ ಮಹಾಪೌರರಾದ ಭಾನುಮತಿ, ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಬರಿ ಶೆಟ್ಟಿ, ಮತ್ತು ಕಮಲಾಕ್ಷಿ ಸೇರಿದಂತೆ ಮಹಿಳಾ ಮೋರ್ಚಾದ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಮಹಿಳೆಯರು ಉಪಸ್ಥಿತರಿದ್ದರು.