
ಶ್ರೀ ಕ್ಷೇತ್ರ ಕುಕ್ಕೆ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ನಟ ಪ್ರಭುದೇವ
Saturday, March 15, 2025
ಮಂಗಳೂರು: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ನಟ, ನಿರ್ದೇಶಕ, ನೃತ್ಯಪಟು ಪ್ರಭುದೇವ ಭೇಟಿ ನೀಡಿ ದೇವರ ದರ್ಶನ ಪಡೆದರು.
ಪ್ರಭುದೇವ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ್ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮೊದಲಾದವರಿದ್ದರು.