
ತ್ರಿಶಾ ಕ್ಲಾಸಸ್: ಸಿಎಸ್ ಎಕ್ಸಿಕ್ಯೂಟಿವ್ ಸಾಧಕರಿಗೆ ಸನ್ಮಾನ
ಮಂಗಳೂರು: ಸಿಎ, ಸಿಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗೆ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿಎಸ್ ಎಕ್ಸಿಕ್ಯೂಟಿವ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಮಾ.1 ರಂದು ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ. ರಾಜ್ ಗಣೇಶ ಕಾಮತ್ ಮಾತನಾಡಿ, ಸಿಎಸ್ ಕೋರ್ಸಿನಲ್ಲಿ ಉತ್ತಮ ಉದ್ಯೋಗ ಅವಕಾಶಗಳಿವೆ. ಸರಿಯಾದ ತಯಾರಿಯೊಂದಿಗೆ ಮುಂದಿನ ಹಂತಗಳನ್ನು ಪೂರ್ಣಗೊಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರ ಡಾ. ನಾರಾಯಣ್ ಕಾಯರ್ ಕಟ್ಟೆ ಮಾತನಾಡಿ, ಹೊಸ ವಿಷಯಗಳ ಕಲಿಕೆ ಜೀವನದ ಭಾಗವಾಗಿದೆ. ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳು ವಿಷಯ ಜ್ಞಾನದ ಜೊತೆಗೆ ಪ್ರಾಯೋಗಿಕ ಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.
ವಿದ್ಯಾರ್ಥಿಗಳನ್ನು ಹೆತ್ತವರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳು ಅವರ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜೆಂಟ್‌ನ ಪ್ರಾಂಶುಪಾಲ ಪ್ರೊ. ಮಂಜುನಾಥ ಕಾಮತ್, ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆ ಯಶಸ್ವಿನಿ ಯಶ್‌ಪಾಲ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆದಿತ್ಯಾ ಜೆ. ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಶಿವಾನಿ ಶಣೈ ವಂದಿಸಿದರು.