
ಮಾಜಿ ಸಚಿವರು ಬಿ ಸುಬ್ಬಯ್ಯ ಶೆಟ್ಟಿ ಅವರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಸಂತಾಪ
Monday, March 10, 2025
ಮಂಗಳೂರು: ಮಾಜಿ ಸಚಿವರು ಬಿ ಸುಬ್ಬಯ್ಯ ಶೆಟ್ಟಿ ಅವರ ಅಗಲಿಕೆ ಜಿಲ್ಲಾ ಕಾಂಗ್ರೆಸ್‌ಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹೀಂ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಎನ್.ಎಂ. ಅಡ್ಯಂತಾಯ, ಮೊಹಮ್ಮದ್ ಮಸೂದ್, ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಜಿ.ಎ. ಬಾವ,ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಬಿ.ಎಚ್. ಖಾದರ್, ಶಶಿಧರ್ ಹೆಗ್ಡೆ, ಯು.ಕೆ. ಮೋನು ಸಂಪಾತ ಸೂಚಿಸಿದ್ದಾರೆ.