
ತುಳು ಭವನದಲ್ಲಿ ಇಂದು ತುಳು ಜನಪದ ನೃತ್ಯ ಸ್ಪರ್ಧೆ
Tuesday, March 4, 2025
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿಯಾಗಿ ಆಯೋಜಿಸುವ ವಿದ್ಯಾರ್ಥಿ ತುಳು ಸಮ್ಮೇಳನದ ಅಂಗವಾಗಿ ಮಾ.5 ರಂದು ಕಾಲೇಜು ವಿದ್ಯಾರ್ಥಿಗಳಿಗಾಗಿ ತುಳು ಜನಪದ ನೃತ್ಯ ಸ್ಪರ್ಧೆಯನ್ನು ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.
ಈ ತುಳು ಜನಪದ ನೃತ್ಯ ಸ್ಪರ್ಧೆಯನ್ನು ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಬೆಳಿಗ್ಗೆ ಹತ್ತು ಗಂಟೆಗೆ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಶೇಷಪ್ಪ ಅಮೀನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಅವರು ಗೌರವ ಉಪಸ್ಥಿತರಿರುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.