
ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್
Friday, March 7, 2025
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದಿನಂತೆ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಎಲ್ಲ ಜನರ ಹಿತ ಕಾಯಬೇಕಾದ ಮುಖ್ಯಮಂತ್ರಿ ಕೇವಲ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೋಟ್ಯಾಂತರ ರೂ. ಘೋಷಿಸಿದ್ದಾರೆ. ಸರ್ಕಾರದ ಸಾಲದ ಪ್ರಮಾಣ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು ಆತಂಕಕಾರಿಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಕರಾವಳಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಡಕೆ ಬೆಳೆಗಾರರ ಸಮಸ್ಯೆಗೆ ಬಜೆಟ್‌ನಲ್ಲಿ ಯಾವುದೇ ಸ್ಪಂದನೆ ದೊರೆತಿಲ್ಲ. ಮೀನುಗಾರಿಕಾ ವಲಯವನ್ನು ಕಡೆಗಣಿಸಲಾಗಿದೆ. ಕೆಲವು ಯೋಜನೆಗಳ ಬಗ್ಗೆ ಉಲ್ಲೇಖವಿದ್ದರೂ ಅದು ಬಜೆಟ್ ಭಾಷಣಕ್ಕೆ ಸೀಮಿತವಾಗಲಿದೆ. ಕೇವಲ ಮುಸ್ಲಿಂ ಸಮುದಾಯವನ್ನು ತೃಪ್ತಿ ಪಡಿಸಲು ಮಂಡಿಸಿದ ಬಜೆಟ್ ಇದಾಗಿದೆ ಎಂದು ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.