ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ: ಇಬ್ಬರ ಬಂಧನ

ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ: ಇಬ್ಬರ ಬಂಧನ


ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರ ವಶದಿಂದ 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಪಾಂಡೇಶ್ವರದ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23) ಹಾಗೂ ಮಂಗಳೂರಿನ ಶಿವಭಾಗ್‌ನ ನಿವಾಸಿ ರೋಯಸ್ಟನ್ ಕ್ಸವಿಯರ್ ಲೋಬೋ(22) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5ನೇ ಕ್ರಾಸ್ ರಸ್ತೆಯಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಮಾರಾಟ ಮಾಡುತ್ತಿದ್ದವರಿಂದ 8,00,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್, ಗಾಂಜಾ, ಚರಸ್ ಮತ್ತು ಗಾಂಜಾ ಹಾಗೂ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು ನಡೆಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಪತ್ತೆ ಕಾರ್ಯಚರಣೆಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರುಗಳಾದ ಸಿದ್ದಾರ್ಥ ಗೋಯಲ್ ಹಾಗೂ ಕೆ. ರವಿಶಂಕರ್, ಅವರ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ., ಪಿಎಸ್‌ಐ ನರೇಂದ್ರ, ಎಎಸ್‌ಐಗಳಾದ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಗಳು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article