ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿಯನ್ನು ಅನುಷ್ಠಾನಗೊಳಿಸಿ: ಶಾಸಕ ಕಾಮತ್

ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿಯನ್ನು ಅನುಷ್ಠಾನಗೊಳಿಸಿ: ಶಾಸಕ ಕಾಮತ್


ಮಂಗಳೂರು: ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.

ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು ಹತ್ತು ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕನಿಷ್ಠ ಈ ಅಧಿವೇಶದಲ್ಲಾದರೂ ಎಲ್ಲಾ ರಿಕ್ಷಾ ಚಾಲಕರುಗಳು ಬಯಸುತ್ತಿರುವ ತಮಿಳುನಾಡು ಮಾದರಿಯ ಪರಿಹಾರ ಮಾರ್ಗವನ್ನು ಅನುಷ್ಠಾನಗೊಳಿಸಿದರೆ ರಿಕ್ಷಾ ಚಾಲಕ ಬಂಧುಗಳ ನಡುವಿನ ಗೊಂದಲ-ಘರ್ಷಣೆ ಕಡಿಮೆಯಾಗುತ್ತದೆ ಎಂದು ಶಾಸಕರು ಹೇಳಿದರು.

ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಕಾಮತ್ ಅವರ ಸಲಹೆಗೆ ನನ್ನ ಸಹಮತವಿದ್ದು, ಖಂಡಿತವಾಗಿಯೂ ಈ ಬಗ್ಗೆ ಅತೀ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article