ನಾಡಿನ ಪ್ರಗತಿ, ಸಮೃದ್ಧಿ ಹಾಗೂ ಸ್ವಾವಲಂಬನೆಗೆ ಪೂರಕ ಬಜೆಟ್

ನಾಡಿನ ಪ್ರಗತಿ, ಸಮೃದ್ಧಿ ಹಾಗೂ ಸ್ವಾವಲಂಬನೆಗೆ ಪೂರಕ ಬಜೆಟ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್ ನಾಡಿನ ಪ್ರಗತಿ, ಸಮೃದ್ಧಿ ಹಾಗೂ ಸ್ವಾವಲಂಬನೆಗೆ ಪೂರಕವಾಗಿದೆ. ಎಲ್ಲಾ ವರ್ಗಗಳ ಶ್ರೇಯೋಭಿವೃದ್ದಿಯ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಹಿಡಿದ ಕನ್ನಡಿಯಾಗಿದೆ. 

ವಿಶೇಷವಾಗಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಈ ಯೋಜನೆಗಳು ಪ್ರಾದೇಶಿಕವಾಗಿ ಆರೋಗ್ಯ, ಶಿಕ್ಷಣ, ಮೀನುಗಾರಿಕೆ, ಪ್ರವಾಸೋದ್ಯಮ, ಮೂಲಸೌಕರ್ಯ, ಪರಿಸರ ಸಂರಕ್ಷಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳನ್ನು ಒಳಗೊಂಡಿದ್ದು, ಕರಾವಳಿಯ ಪ್ರಗತಿಗೆ ಹೊಸ ದಿಕ್ಕು ನೀಡಲಿವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ತಿಳಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article