ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಎ.1 ರಿಂದ ಮೂರರ ವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಏಪ್ರಿಲ್ 1 ರಿಂದ 3 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು & ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾದ್ಯತೆಯಿದ್ದು, ಉತ್ತರ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ. ಅಲ್ಲದೆ ದಕ್ಷಿಣ ಒಳನಾಡು & ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. 

ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಈ ನಡುವೆ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎ,2 ಮತ್ತು 3, 1ರಂದು ಮತ್ತು ದಕ್ಷಿಣ ಒಳನಾಡಿನಲ್ಲಿ ಎ.3ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article