
ಮೂಡಾಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ!: ಶಾಸಕ ಕಾಮತ್
Wednesday, March 26, 2025
ಮಂಗಳೂರು: ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಸರ್ಕಾರಿ ಕಚೇರಿಗಳಲ್ಲಿ ಪ್ರವೇಶ ನಿರ್ಬಂಧಿಸುವ ಕ್ರಮವಿಲ್ಲ. ಆದರೆ ಮಂಗಳೂರಿನ ಮೂಡ ಕಚೇರಿ ಒಳಗೆ ಯಾವ ಸಾರ್ವಜನಿಕರಿಗೂ, ವಕೀಲರುಗಳಿಗೂ ಈಗ ಪ್ರವೇಶ ನಿರ್ಬಂಧಿಸಲಾಗಿದೆ. ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿದ್ದು ಕೆಟ್ಟ ದಾಖಲೆಯೊಂದು ನಮ್ಮ ಮಂಗಳೂರಿನ ಹೆಸರಿನಲ್ಲಿ ದಾಖಲಾಗಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಇಲ್ಲಿನ ಅಟಲ್ ಸೇವಾ ಕೇಂದ್ರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಬ್ರಹ್ಮಾಂಡ ಭ್ರಷ್ಟಾಚಾರದ ಗೂಡಾಗಿರುವ ಮಂಗಳೂರಿನ ಮೂಡಾದ ಅಕ್ರಮಗಳನ್ನು ನಿಯಂತ್ರಿಸುವುದನ್ನು ಬಿಟ್ಟು ನ್ಯಾಯಯುತವಾಗಿ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗಲು ಬರುವ ಸಾರ್ವಜ ನಿಕರನ್ನು, ವಕೀಲರುಗಳನ್ನು ನಿರ್ಬಂಧಿಸುವುದು ಎಷ್ಟು ಸರಿ? ಮೂಡಾದಲ್ಲಿ ಅಗತ್ಯ ಸಿಬ್ಬಂದಿಗಳೇ ಇಲ್ಲ. ಟೈಪಿಸ್ಟ್, ಸರ್ವೇಯರ್ ಹೀಗೆ ಪ್ರತಿಯೊಂದು ವಿಭಾಗದಲ್ಲೂ ಸಿಬ್ಬಂದಿ ಕೊರತೆ ಇದೆ. ಹೀಗಾದರೆ ಸಮಯಕ್ಕೆ ಸರಿಯಾಗಿ ಜನರ ಕೆಲಸಗಳು ನಡೆಯುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದರು.